
ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಇವರ ಆದ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬೂತ್ ಅಧ್ಯಕ್ಷರಿಗೆ ಪಕ್ಷ ಇಂದು ನಾಮಫಲಕವನ್ನು ನೀಡುವ ಮೂಲಕ ಬೂತ್ ಅಧ್ಯಕ್ಷರ ಮಹತ್ವವನ್ನು ನೆನಪಿಸಿ ಅವರ ಜವಾಬ್ದಾರಿಯನ್ನೂ ನೆನಪಿಸುತ್ತಿದೆ. ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೂ ಬೂತ್ ಅಧ್ಯಕ್ಷರಿಗೂ ಸಮಾನ ಗೌರವ ಇದೆ. ಈ ಗೌರವಯುತ ಜವಾಬ್ದಾರಿ ಹೊಂದಿರುವ ಎಲ್ಲ ಬೂತ್ ಅಧ್ಯಕ್ಷರುಗಳು ತಮ್ಮ ಕರ್ತವ್ಯಗಳನ್ನು ಅರಿತು ಬೂತ್ ನಲ್ಲಿ ಸಂಘಟನಾತ್ಮಕವಾಗಿ ಪಕ್ಷ ಬೆಳೆಸಿ ತಾನೂ ಬೆಳೆಯಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಹಿಂದುಳಿಗೆ ಮೋರ್ಚ ಪ್ರಧಾನ ಕಾರ್ಯದರ್ಶಿ ಗಳಾದ ಯಶ್ ಪಾಲ್ ಸುವರ್ಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ಕಾರ್ಯಕರ್ತರು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.