
ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಗಾಂಧಿ ಜಯಂತಿ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಗಾಂಧೀಜಿ ಚಿಂತನೆಗಳಾದ ಸ್ವದೇಶಿ ವಸ್ತುಗಳ ಬಳಕೆ, ಸ್ವಚ್ಚತಾ ಕಾರ್ಯಕ್ರಮಗಳು ಎಂದಿಗೂ ಆದರ್ಶಪ್ರಾಯವಾಗಿದ್ದು ಎಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸಬೇಕು ಮತ್ತು ಕಡ್ಡಾಯವಾಗಿ ಖಾದಿ ವಸ್ತುಗಳನ್ನು ಬಳಸಬೇಕು ಎಂದರು. ಖಾದಿ ಬಟ್ಟೆಗಳು ಎಲ್ಲ ಋತುಮಾನಗಳಿಗೆ ಅನುಕೂಲಕರವಾಗಿದ್ದು ಆರೋಗ್ಯಕ್ಕೂ ಬಹಳ ಉತ್ತಮವಾದುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಗೋಪಾಲಕೃಷ್ಣ ರಾವ್, ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್, ನವೀನ್ ಎಸ್ ಕೆ, ಪವಿತ್ರ ಶೆಟ್ಟಿ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷರಾದ ಪ್ರವಿಣ್ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಮಾಲಿನಿ ಶೆಟ್ಟಿ, ಪೂರ್ಣಿಮಾ , ರಾಜೇಶ್ ಕುಂದರ್, ಲತಾ ಆಚಾರ್ಯ, ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.