ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ:ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು. ನಂತರದಲ್ಲಿ ಮುಖ್ಯ ರಸ್ತೆಯ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಚಿಂತನೆಗಳು ಆದರ್ಶಗಳನ್ನು ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಪಂಚಾಯತ್ ಸದಸ್ಯರುಗಳು, ಹಿರಿಯರಾದ ಭಾರತಿ ಶೆಟ್ಟಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started