
ಕಾಪು:ಶಿರ್ವ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳಿಂದ ದೇಶದ ಗಡಿಯಲ್ಲಿ ಯೋಧರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಯೋಧರಾದ ರಾಜೇಂದ್ರ ಪಾಟ್ಕರ್ ಇವರಿಗೆ ಗೌರವಾರ್ಪಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಪಾಟ್ಕರ್ ಕೋಡುಗುಡ್ಡೆ, ಮಂಡಲ ಕಾರ್ಯಕಾರಣಿ ಸದಸ್ಯರಾದ ಸಂತೋಷ್ ಶೆಟ್ಟಿ ಕೋಡು ಪಂಚಾಯತ್ ಸದಸ್ಯರಾದ ಪ್ರವೀಣ್ ಪೂಜಾರಿ ,ಆಶಾ ಆಚಾರ್ಯ, ಅನೂಸುಯಪೂಜಾರಿ,ಮಮತಾ ಶೆಟ್ಟಿ, ರಿಚರ್ಡ್ ಫೆರವೋ, ದೊಲ್ಫಿ, ಸಂದೀಪ ಬಂಗೇರ (ಕೀರ್ತಿ) ಹಾಗೂ ಶಿರ್ವದ ಕಾರ್ಯಕರ್ತರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.