ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಜಿಲ್ಲಾ ಯುವ ಮೋರ್ಚಾ ಸಂಯೋಜನೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ನೇತೃತ್ವದ ತಂಡದ ಹಿಮ್ಮೇಳದಲ್ಲಿ “ಬೀಷ್ಮ ವಿಜಯ” ಯಕ್ಷಗಾನ ತಾಳ ಮದ್ದಲೆ ಪ್ರದರ್ಶನ ನಡೆಯಲಿದೆ.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರು, ಅಭಿಯಾನದ 9 ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a comment

Design a site like this with WordPress.com
Get started