
ಕಾಪು: ಬಿಜೆಪಿ ಕಚೇರಿಯಲ್ಲಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಮೋರ್ಚ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪದಾಧಿಕಾರಿಗಳಿಗೆ ಪಕ್ಷ ನೂತನವಾಗಿ ಕೊಟ್ಟ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ಎಲ್ಲ ಬೂತ್ ಗಳಲ್ಲಿಯೂ ಕಾರ್ಯಕ್ರಮ ನಡೆಯುವಂತಹ ಶಕ್ತಿಕೇಂದ್ರ ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದರು. ಕಾಪು ಕ್ಷೇತ್ರ ಶಾಸಕರಾದ ಲಾಲಾಜಿಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಗಳನ್ನು ನೆನಪಿಸಿದರು. ಜಿಲ್ಲ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸಿ ಕಾರ್ಯಕ್ರಮಗಳನ್ನು ಮಾಡಬೇಕು, ಮುಂದೆ ಚುನಾವಣೆಗಳ ಸಾಲು ಇದೆ, ಎಲ್ಲ ಚುನಾವಣೆಗಳನ್ನು ಗೆಲ್ಲಬೇಕಾದರೆ ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಸಭೆಗಳನ್ನು ನಡೆಸಬೇಕು ಎಂದರು.
ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಉಪಸ್ಥಿತರಿದ್ದರು.