ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ, ಅಭಿಮಾನಿಗಳ ಪ್ರೀತಿಯ ‘ಅಪ್ಪು’ ಎಂದೇ ಖ್ಯಾತರಾಗಿದ್ದ ‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಭಾವಪೂರ್ಣ ಶೃದ್ಧಾಂಜಲಿಯನ್ನು ಸಮರ್ಪಿಸುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ರವರು ತನ್ನ ಬದುಕಿನ ಅತ್ಯಮೂಲ್ಯ ಕ್ಷಣಗಳನ್ನು ಕೇವಲ ಚಿತ್ರರಂಗಕ್ಕೆ ಮಾತ್ರ ಮೀಸಲಿಡದೆ ಕನ್ನಡ ನಾಡಿನಾದ್ಯಂತContinue reading “ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಅನರ್ಘ್ಯ ರತ್ನ : ಕುಯಿಲಾಡಿ ಸುರೇಶ್ ನಾಯಕ್”
Daily Archives: October 29, 2021
ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ
ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ. ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದುContinue reading “ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ”
ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆContinue reading “ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ”