ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ


ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.


ಪುನೀತ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಆದರೆ ಅವರ ಆರೋಗ್ಯದ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ವಿವರಿಸಿದ್ದಾರೆ.

Leave a comment

Design a site like this with WordPress.com
Get started