ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಂಘದ ಅಧ್ಯಕ್ಷರು ಹಾಗೂ 2020-21ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎ.ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ರಾಜೇಶ್, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಆಡಳಿತ ಸಮಿತಿಯ ಸದಸ್ಯರಾದ ಶಿವದಾಸ್ ಪಿ., ಸುಧಾಕರ್ ಎ., ಕುಶಲ್ ಕುಮಾರ್ ಎ., ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ಮಹೇಂದ್ರ ಕೋಟ್ಯಾನ್, ಸುಧಾಕರ ಪೂಜಾರಿ, ಗುರುರಾಜ್ ಪೂಜಾರಿ, ಸತೀಶ್ ಜಿ.ಪೂಜಾರಿ, ಜಯಂತಿ ಹರೀಶ್, ವಿನಯ್ ಕುಮಾರ್, ವಿನೋದ್ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started