ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ 80 ರಷ್ಟು ಸುಟ್ಟ ಗಾಯಗಳಾಗಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಕೂನೂರಿನಲ್ಲಿರುವ ವೆಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಡಿಎಸ್ ಜ. ಬಿಪಿನ್ ರಾವತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೇನಾಪಡೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರು: ಸಿಡಿಎಸ್ ಬಿಪಿನ್ ರಾವತ್ ಮತ್ತುContinue reading “ಭೀಕರ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್: CDS ಬಿಪಿನ್ ರಾವತ್ ಮತ್ತು ಪತ್ನಿ ಹಾಗೂ 11 ಮಂದಿ ಸಾವು”
Daily Archives: December 8, 2021
ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!
ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್ ದಂಪತಿ ಸೇರಿದಂತೆ ನಾಲ್ವರು ಅಧಿಕಾರಿಗಳು ಹಾಗೂ 14 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸೇನಾ ಹೆಲಿಕಾಫ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಶಂಕಿಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದು, ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.Continue reading “ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!”