

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ 80 ರಷ್ಟು ಸುಟ್ಟ ಗಾಯಗಳಾಗಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಕೂನೂರಿನಲ್ಲಿರುವ ವೆಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಡಿಎಸ್ ಜ. ಬಿಪಿನ್ ರಾವತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೇನಾಪಡೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರು:
ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರಾಜಿಂದರ್ ಸಿಂಗ್, ಗುರು ಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜ, ಸತ್ಪಾಲ್, ಪೈಲೆಟ್ ಪೃಥ್ವಿ ಸಿಂಗ್ ಚೌಹಾಣ್ ಅವರು ಕೊನೆಯುಸಿರೆಳೆದಿದ್ದಾರೆ.