ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರದ್ದು ವಿಶಿಷ್ಟವಾದಂಥ ವ್ಯಕ್ತಿತ್ವ. ತುಳುನಾಡಿನ ಗರೋಡಿ, ದೈವಾರಾಧನೆ, ಜಾನಪದ ಸಂಸ್ಕ್ರತಿಯ ಬಗ್ಗೆ ಅಗಾಧವಾದ ಅಧ್ಯಯನ ಮಾಡಿರುವ ಇವರು ತುಳುನಾಡ ಗರೋಡಿಗಳ ಇತಿಹಾಸದ ನಿಘಂಟು ಎಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಡಿ.9ರಂದು ಬ್ರಹ್ಮಾವರದ ಪರಿಸರದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಯಕ್ಷಗಾನ ಧಾರ್ಮಿಕ ಕಾರ್ಯಕ್ರಮದಲ್ಲಿ ಬನ್ನಂಜೆ ಬಾಬು ಅಮೀನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದContinue reading “ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ”
Daily Archives: December 9, 2021
ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ
ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ರಾಜ್ಯದಲ್ಲೇ ವೈಶಿಷ್ಟ್ಯಪೂರ್ಣ: ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲೆಯ ಎಲ್ಲಾ ಮೋರ್ಚಾಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಿರಂತರ ವೈವಿಧ್ಯಮಯ ಕಾರ್ಯ ಚಟುವಟಿಕೆಗಳಿಂದ ಜಿಲ್ಲೆಯ ಮೋರ್ಚಾಗಳಲ್ಲೇ ಮೂಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಲ್ಪೆ ಕಡಲ ತೀರದ ತುದಿಯಲ್ಲಿರುವ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡಿರುವುದು ರಾಜ್ಯಕ್ಕೇ ಮಾದರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ-ಮಲ್ಪೆ ಕಡಲContinue reading “ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ”
ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಡಿ.8ರಂದು ತಮಿಳುನಾಡಿನ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಅಪಘಾತಕ್ಕೀಡಾದ ಭಾರತೀಯ ವಾಯುಸೇನೆಯ ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಅಪ್ಪಟ ದೇಶಪ್ರೇಮಿ, ದೇಶದ ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರೆನಿಸಿದ್ದ ಜನರಲ್ ಬಿಪಿನ್ ರಾವತ್ ರವರಿಗೆ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸಿ,Continue reading “ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”
ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಸುಧೀರ್ಘ ಚಳುವಳಿ ಅಂತ್ಯ
ನವದೆಹಲಿ:ಕೇಂದ್ರ ಗೃಹ ಸಚಿವಾಲಯದ ಜೊತೆ ತೀವ್ರ ಮಾತುಕತೆಗಳ ನಂತರ, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ವರ್ಷದಿಂದ ನಡೆಸುತ್ತಿದ್ದ ಸುಧೀರ್ಘ ಚಳವಳಿಯನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಂಗೀಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ.ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಸಂಸ್ಥೆಯಾದ ಸಂಯುಕ್ತContinue reading “ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಸುಧೀರ್ಘ ಚಳುವಳಿ ಅಂತ್ಯ”