ಉಡುಪಿ: ಕಾಪು ಪುರಸಭೆ ಚುನಾವಣೆಯ 23 ಸ್ಥಾನಗಳಲ್ಲಿ 12 ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.Continue reading “ಕಾಪು ಪುರಸಭೆ ಚುನಾವಣೆ ಬಿಜೆಪಿ ಗೆಲುವು ಐತಿಹಾಸಿಕ: ಕುಯಿಲಾಡಿ ಸುರೇಶ್ ನಾಯಕ್”