Design a site like this with WordPress.com
Get started

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ನಯನಾ ಗಣೇಶ್ ಉದ್ಯಾವರ ಇವರು ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಗ್ಗೆ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದೆ. ಪಕ್ಷದ ಕ್ರಿಯಾಶೀಲ ಪದಾಧಿಕಾರಿ ನಯನಾ ಗಣೇಶ್ ರವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ”

ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ

ಉಡುಪಿ: ಉಡುಪಿ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕಾಶೀ ಮಠ ಸಂಸ್ಥಾನದ ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಕೊಡಮಾಡಿದ ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಶುಕ್ರವಾರ ಗೌಡ ಸಾರಸ್ವತ ಸಮಾಜದ ದೇವಸ್ಥಾನಗಳ ಪ್ರಮುಖರು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿದರು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಿ ಪ್ರಪಂಚದ ಎಲ್ಲಾ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ ಸಮರ್ಪಣೆಯಾಗಬೇಕು. ಶ್ರೀಕೃಷ್ಣನ ವಿಗ್ರಹದಲ್ಲಿ ದೇವರನ್ನು ನೋಡಿ ಈ ಹಾರವನ್ನು ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಸಮರ್ಪಿಸುತ್ತಿದ್ದಾರೆ ಎಂದುContinue reading “ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ”

ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರಕಾರದ ಕೊಡುಗೆ ಸ್ವಾಗತಾರ್ಹ: ಜಿಲ್ಲಾ ಬಿಜೆಪಿ

ವರ್ಷದ ಪ್ರಥಮ ದಿನದಂದೇ ನಾಡಿನ ರೈತಾಪಿ ವರ್ಗಕ್ಕೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತು ಬಿಡುಗಡೆಯ ಪ್ರಧಾನಿ ನರೇಂದ್ರ ಮೋದಿ ನಡೆ ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. *ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆಗೆ ಅಭಿನಂದನೆ:* ಉಡುಪಿ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಉಡುಪಿ ನಗರವನ್ನು ಜೋಡಿಸುವ ರಾಷ್ಟ್ರೀಯ ಹೆದ್ದಾರಿ 169ಎ ಇದರ 2 ಪ್ರಮುಖ ಕೊಂಡಿಗಳಾಗಿರುವ ಹೆಬ್ರಿ-ಪರ್ಕಳ ಮತ್ತು ಆದಿವುಡುಪಿ ಕರಾವಳಿ ಜಂಕ್ಷನ್-ಮಲ್ಪೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರContinue reading “ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರಕಾರದ ಕೊಡುಗೆ ಸ್ವಾಗತಾರ್ಹ: ಜಿಲ್ಲಾ ಬಿಜೆಪಿ”