
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ನಯನಾ ಗಣೇಶ್ ಉದ್ಯಾವರ ಇವರು ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಗ್ಗೆ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದೆ.
ಪಕ್ಷದ ಕ್ರಿಯಾಶೀಲ ಪದಾಧಿಕಾರಿ ನಯನಾ ಗಣೇಶ್ ರವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿಯಲ್ಲಿ ಉಡುಪಿ ಜಿಲ್ಲೆಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿರುವ ರಾಜ್ಯ ಬಿಜೆಪಿ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.