Design a site like this with WordPress.com
Get started

ನೂತನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿಗೊಂಡ ಬಳಿಕ ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಉಡುಪಿಗೆ ಆಗಮಿಸಿದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ರವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಉಡುಪಿ ಪ್ರವಾಸೀ ಮಂದಿರದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್Continue reading “ನೂತನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ”

ಬ್ರಹ್ಮಶ್ರೀ ನಾರಾಯಣ ಗುರು ಸ್ವಾಭಿಮಾನ ಜಾಥಾಕ್ಕೆ ಅಚ್ಯುತ ಅಮೀನ್ ಕಲ್ಮಾಡಿ ಚಾಲನೆ

ಶ್ರೀ ನಾರಾಯಣ ಗುರು ವಿಚಾರ ವೇದಿಕೆ(ರಿ.) ಕರ್ನಾಟಕ ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಭಿಮಾನ ಜಾಥಾದ ವಾಹನಕ್ಕೆ ವೇದಿಕೆಯ ರಾಜ್ಯ ಉಪಾಧ್ಯಕ್ಷ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಶ್ರೀ ಬ್ರಹ್ಮ ಬೈದೇರುಗಳ ಗರೋಡಿಯ ಪರಿಸರದಲ್ಲಿ ಜ.26ರ ಬೆಳಿಗ್ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ(ರಿ.) ಉಡುಪಿ ತಾಲೂಕು ಅಧ್ಯಕ್ಷ, ಕಲ್ಮಾಡಿ ಗರೋಡಿಯ ಉಪಾಧ್ಯಕ್ಷ ಶಶಿಧರ ಎಂ.Continue reading “ಬ್ರಹ್ಮಶ್ರೀ ನಾರಾಯಣ ಗುರು ಸ್ವಾಭಿಮಾನ ಜಾಥಾಕ್ಕೆ ಅಚ್ಯುತ ಅಮೀನ್ ಕಲ್ಮಾಡಿ ಚಾಲನೆ”

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಸರಿ ಭಯದಿಂದ ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಭಿಮಾನಿಯೊಬ್ಬರು ಕೇಸರಿ ಪೇಟ ತೊಡಿಸಲು ಬಂದ ಅರೆ ಕ್ಷಣದಲ್ಲೇ ವಿಪರೀತ ಭಯಗೊಂಡು ಅದನ್ನು ಕಿತ್ತೊಗೆದ ವಿಲಕ್ಷಣ ಘಟನೆಯೊಂದಿಗೆ ಸಿದ್ದರಾಮಯ್ಯ ತಾನು ಯಾವತ್ತೂ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಜಗಜ್ಜಾಹೀರು ಮಾಡಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕೇಸರಿ ಬಣ್ಣ ತ್ಯಾಗದ ಸಂಕೇತ, ಹಿಂದುತ್ವದ ಸಂಕೇತ. ಕಾಂಗ್ರೆಸಿಗರು ಹಿಂದುತ್ವವನ್ನು ಯಾವ ರೀತಿ ದ್ವೇಷಿಸುತ್ತಾರೆ ಎಂಬುದುContinue reading “ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಸರಿ ಭಯದಿಂದ ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್”

ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ನಿಂದ ಹಿಂದುತ್ವದ ಪಾಠ ಅನಗತ್ಯ; ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಅರ್ಥಹೀನ: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ಕೇರಳ ರಾಜ್ಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಕಮ್ಯೂನಿಸ್ಟ್ ಸರಕಾರದ ಲೋಪದಿಂದಾಗಿ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ವಿಶ್ವವಂಧ್ಯ ಶ್ರೇಷ್ಠ ಸಂತರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ಸಿಗದಿರುವುದು ಎಲ್ಲರಿಗೂ ನಿರಾಸೆ ಮೂಡಿಸಿರುವುದು ವಾಸ್ತವ. ಆದರೆ ಸದಾ ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ಕೇವಲ ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ವಿವಾದವನ್ನಾಗಿಸಲು ಹವಣಿಸುತ್ತಿರುವುದು ಶೋಚನೀಯ. ತನ್ನ ಆಡಳಿತಾವಧಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿದ್ದ ಹಿಂದೂ ಯುವಕರ ಹತ್ಯೆ ನಡೆದಾಗ ಸುಮ್ಮನಿದ್ದ, ಒಂದೇContinue reading “ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ನಿಂದ ಹಿಂದುತ್ವದ ಪಾಠ ಅನಗತ್ಯ; ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಅರ್ಥಹೀನ: ಉಡುಪಿ ಜಿಲ್ಲಾ ಬಿಜೆಪಿ”

ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಎಂಬ ಅಮೃತ ವಾಣಿಯನ್ನು ನಾಡಿಗೆ ನೀಡಿರುವ ದೀನ ದಲಿತೋದ್ಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳು ರಾಷ್ಟ್ರ ಕಂಡ ಶ್ರೇಷ್ಠ ದಾರ್ಶನಿಕರು. ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಕೇರಳ ಸರಕಾರ ಪ್ರಾಯೋಜಿತ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ನಿಗದಿತ ತಾಂತ್ರಿಕ ಕಾರಣಗಳಿಂದ ಅವಕಾಶ ಸಿಗದೇ ಇರುವ ಬಗ್ಗೆ ವಸ್ತುಸ್ಥಿತಿಯ ಅರಿವಿದ್ದರೂ ಉದ್ದೇಶಪೂರ್ವಕವಾಗಿ ಕೇರಳದ ಕಮ್ಯೂನಿಸ್ಟ್ ಸರಕಾರ ಅನಗತ್ಯ ವಿವಾದವನ್ನು ಹುಟ್ಟುಹಾಕಿರುವುದು ಮತ್ತು ಈ ಸಂಚಿನಲ್ಲಿ ರಾಜ್ಯದ ಕಾಂಗ್ರೆಸ್Continue reading “ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್”

ತೀರಾ ಅಶಕ್ತ ( Bedridden) ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ( terminally ill) ರೋಗಿಗಳ ಶುಶ್ರೂಷೆ ಗಾಗಿ ಸೇವಾತಂಡ ರಚನೆ

ಉಡುಪಿ: ಉಡುಪಿಯ ಅಲಂಕಾರ್ ಥಿಯೇಟರ್ ಹಿಂಬದಿ ಎ . ಜೆ ಆಲ್ಸೆ ರಸ್ತೆಯಲ್ಲಿ ರುವ ಇಂಚರ ಸರ್ಜಿಕಲ್ ಕ್ಲಿನಿಕ್ ನ ಸಂಚಾಲಕತ್ವದಲ್ಲಿ ಹಾಗೂ ಡಾ ವೈ ಸುದರ್ಶನ ರಾವ್ ನೇತೃತ್ವದ ಶ್ರೀ ಎಲ್ಲೂರು ಲಕ್ಷ್ಮೀ ನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ಉಡುಪಿ ಪರಿಸರದಲ್ಲಿನ ತೀರಾ ಅಶಕ್ತ ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ರೋಗಿಗಳ ಶುಶ್ರೂಷೆ ಯನ್ನು ಅವರವರ ನಿವಾಸದಲ್ಲಿಯೇ ಒದಗಿಸುವ ಉದ್ದೇಶ ದಿಂದ ಸೇವಾತಂಡವೊಂದನ್ನು ರಚಿಸಲಾಗಿದೆ . ಈ ಸೇವಾತಂಡದಲ್ಲಿ ಓರ್ವContinue reading “ತೀರಾ ಅಶಕ್ತ ( Bedridden) ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ( terminally ill) ರೋಗಿಗಳ ಶುಶ್ರೂಷೆ ಗಾಗಿ ಸೇವಾತಂಡ ರಚನೆ”

ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ

ಉಡುಪಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ! ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜ.17ರಂದು ಕುತ್ಪಾಡಿ ಕಾನಂಗಿ ಬಾಲಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸರಳ ರೀತಿಯಲ್ಲಿ ನೆರವೇರಿತು. ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು ಇವರಿಂದ ಭಜನಾ ಸೇವೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿContinue reading “ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ”

ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ನಿಖರವಾಗಿ ಒಂದು ವರ್ಷದ ಹಿಂದೆ ಭಾರತವು ಲಸಿಕೆ ಹಾಕುವ ಪ್ರಯಾಸಕರ ಅಭಿಯಾನವನ್ನು ಪ್ರಾರಂಭಿಸಿತು. ಭೀಕರ ಕೋವಿಡ್ ಸಾಂಕ್ರಾಮಿಕದ ಮಧ್ಯೆ 135 ಕೋಟಿ ದೇಶವಾಸಿಗಳು ಸಿಲುಕುವ ಅಪಾಯವಿತ್ತು. ಆದರೆ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಅಸಾಧ್ಯ ಅಂದುಕೊಂಡಿದ್ದ ಮಹತ್ಕಾರ್ಯವು ಸುಲಭ ಸಾಧ್ಯವಾಯಿತು. ಇಡೀ ಜಗತ್ತು ನಮ್ಮನ್ನು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಅವರ ನೇತೃತ್ವದ ಇಡೀ ತಂಡದ ಅದ್ವಿತೀಯ ಸಾಧನೆ ಅಭಿನಂದನೀಯ. ಈ ಬೆಳವಣಿಗೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರContinue reading “ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್‌ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್‌ ಕಣಕ್ಕೆ

https://twitter.com/BJP4India/status/1482250983984234497?t=l43bj-u3_mzxO_AZNZ94oA&s=19 ಉ.ಪ್ರ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್‌ ಸಿಂಗ್‌ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗೋರಕ್ಪುರ್ ಕ್ಷೇತ್ರದಿಂದ‌ ಕಣಕ್ಕಿಳಿಯಲಿದ್ದರೆ, ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಸಿರಾತು ಕ್ಷೇತ್ರದಿಂದ ಅಭ್ಯರ್ಥಿಯಾಗಲಿದ್ದಾರೆ. ಯೋಗಿ ಆದಿತ್ಯನಾಥ್‌ ಈ ಹಿಂದೆContinue reading “ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್‌ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್‌ ಕಣಕ್ಕೆ”

ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ

ಉಡುಪಿ: ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೂ ಕೂಡಾ ವಿವಿಧ ವಿನೂತನ ಜಾಲಗಳ ಮೂಲಕ ಜನರ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಉಡುಪಿ ಜಿಲ್ಲೆಯಾದ್ಯಂತ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಇದೇ ರೀತಿ ಆಕ್ರಮ ಗೋಕಳವು, ಗೋಹತ್ಯೆ ಮುಂದುವರಿದರೆ ಸಮಾಜದಲ್ಲಿ ಶಾಂತಿ ಭಂಗವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲಾ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುವ ಮೂಲಕ ಶಂಕಿತರ ಪೂರ್ವಾಪರContinue reading “ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”