

ಉಡುಪಿ: ಜ.3ರಂದು ರಾಮನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಮತ್ತು ನಾಡ ಪ್ರಭು ಕೆಂಪೇಗೌಡ ರವರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾ ಸಂಸ್ಕ್ರತಿಯನ್ನು ವಿರೋಧಿಸಿ, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪ್ರತಿಭಟನಾ ಸಭೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಸ್. ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಹಿಂದುಸ್ಥಾನ್ ಶಿಪ್ ಯಾರ್ಡ್ ಸ್ವತಂತ್ರ ನಿರ್ದೇಶಕ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ನಗರ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಕಾರ್ಯದರ್ಶಿ ದಯಾಶಿನಿ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಮಂಜುನಾಥ್ ಮಣಿಪಾಲ್, ರಜನಿ ಹೆಬ್ಬಾರ್, ವಿಜಯಲಕ್ಷ್ಮಿ, ಚಂದ್ರಶೇಖರ್, ಅಶೋಕ್ ನಾಯ್ಕ್, ಸುಂದರ ಕಲ್ಮಾಡಿ, ದೇವದಾಸ್ ಶೆಟ್ಟಿಗಾರ್, ಪ್ರಮುಖರಾದ ಉಪೇಂದ್ರ ನಾಯಕ್, ವಿಜೇತ್ ಕುಮಾರ್, ಚಂದ್ರಶೇಖರ ಪ್ರಭು, ದಿಲೇಶ್ ಶೆಟ್ಟಿ, ಜುನೈದ್, ಅಪ್ಸರ್ ಉಚ್ಚಿಲ, ವಿಜಯ ಪೂಜಾರಿ, ನಾಗರಾಜ್ ಕರ್ಕೇರ, ಸಂತೋಷ್ ಆಚಾರ್ಯ, ಆನಂದ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.