Design a site like this with WordPress.com
Get started

ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಕಾರ್ಯಪ್ರವೃತ್ತವಾಗಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳು ಸಿಗಲಿವೆ. ಹಿಂದುಳಿದ ವರ್ಗಕ್ಕೆ ಸ್ವಾಭಾವಿಕವಾಗಿ ಹೆಚ್ಚಿನ ಅವಕಾಶಗಳಿವೆ.

ಪಕ್ಷದ ಪ್ರಸಕ್ತ ಜಿಲ್ಲಾ ತಂಡ ಜವಾಬ್ದಾರಿಯನ್ನು ವಹಿಸಿಕೊಂಡು ಜ.27ರಂದು ಯಶಸ್ವೀ ಎರಡು ವರ್ಷಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ಇನ್ನಷ್ಟು ವೇಗವನ್ನು ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಜೊತೆಗೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಪೂರ್ಣ ಪ್ರಮಾಣದಲ್ಲಿ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕುಯಿಲಾಡಿ ಹೇಳಿದರು.

ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಮಾತನಾಡಿ, ಜಗ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯತತ್ಪರತೆಯಿಂದ ಬಿಜೆಪಿ ಕಾರ್ಯಕರ್ತರೆನಿಸಿ ಕೊಳ್ಳಲು ಹೆಮ್ಮೆ ಎನಿಸುತ್ತದೆ. ಇಂದು ಗ್ರಾಮದಿಂದ ರಾಜ್ಯ, ಕೇಂದ್ರದ ವರೆಗೆ ಎಲ್ಲಾ ಸ್ತರಗಳಲ್ಲಿ ಬಿಜೆಪಿ ಅಡಳಿತವಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಸನ್ನಿವೇಶದಲ್ಲಿ ಪಕ್ಷದ ಕಾರ್ಯಕರ್ತರ ಜವಾಬ್ದಾರಿಯು ಅತ್ಯಂತ ಮಹತ್ವಪೂರ್ಣವಾಗಿದೆ. ಚುನಾವಣೆಗಳಲ್ಲಿ ಸೋತು ಕಂಗೆಟ್ಟಿರುವ ಕಾಂಗ್ರೆಸ್ ನ ವ್ಯವಸ್ಥಿತ ಅಪಪ್ರಚಾರ, ಗೂಂಡಾ ಸಂಸ್ಕೃತಿ, ಜನ ವಿರೋಧಿ ಮತ್ತು ಹಿಂದೂ ವಿರೋಧಿ ಮಾನಸಿಕತೆಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸಿ ಬಿಜೆಪಿಯ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಎಲ್ಲರೂ ಸಂಘಟಿತರಾಗಿ ಶ್ರಮಿಸೋಣ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠ್ಠಲ ಪೂಜಾರಿ ಯವರು ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ, ಶ್ರವಣಬೆಳಗೊಳದಲ್ಲಿ ಜರಗಿದ 12ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಯಕ್ಷರತ್ನ’ ಪ್ರಶಸ್ತಿಯೊಂದಿಗೆ ಪುರಸ್ಕರಿಸಲ್ಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾದ ಲೀಲಾ ಅರ್. ಅಮೀನ್, ದಿನೇಶ್ ಎರ್ಮಾಳು, ಮನೋಜ್ ಕರ್ಕೇರ, ಗಣೇಶ್ ಕುಮಾರ್ ಉದ್ಯಾವರ, ಕಾರ್ಯದರ್ಶಿಗಳಾದ ಜ್ಯೋತಿ ಹರೀಶ್, ಶೇಖರ್ ಪೂಜಾರಿ ಕುಂದಾಪುರ, ಅಮೃತ್ ಪೂಜಾರಿ ಎಡ್ತಾಡಿ, ಕೋಶಾಧಿಕಾರಿ ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಕೇಶ್ ಜೋಗಿ ವಂದಿಸಿದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: