ಉಡುಪಿ: ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಯ ಅನುಷ್ಠಾನದ ಬಗ್ಗೆ ಯಾವುದೇ ಆಸಕ್ತಿ ವಹಿಸದೇ ವೃಥಾ ಕಾಲಹರಣ ಮಾಡಿರುವ ಕಾಂಗ್ರೆಸ್ ಕೇವಲ ತನ್ನ ವೈಫಲ್ಯವನ್ನು ಮರೆಮಾಚಲು ನಡೆಸಿರುವುದು ಮಾತ್ರ ಸುಳ್ಳಿನ ಜಾತ್ರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೃಷ್ಣೆಯ ವಿಚಾರದಲ್ಲಿ ನಾಟಕೀಯ ಪಾದಯಾತ್ರೆ ನಡೆಸಿ ಉತ್ತರ ಕರ್ನಾಟಕದ ಜನತೆಗೆ ಮಂಕು ಬೂದಿ ಎರಚಿದನ್ನು ರಾಜ್ಯದ ಜನತೆ ಮರೆತಿಲ್ಲ. ಇದರ ಮುಂದುವರಿದ ಭಾಗವಾಗಿ ಇದೀಗ ಕಾವೇರಿ ನೀರಿಗೆ ಮೇಕೆದಾಟು ಹೆಸರಲ್ಲಿ ಕಾಂಗ್ರೆಸ್ ನಡೆಸಿರುವುದುContinue reading “ವೈಫಲ್ಯ ಮರೆ ಮಾಚಲು ಕಾಂಗ್ರೆಸ್ ನಡೆಸಿದ ಸುಳ್ಳಿನ ಜಾತ್ರೆ : ಕುಯಿಲಾಡಿ ಸುರೇಶ್ ನಾಯಕ್”
Monthly Archives: January 2022
ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ
ಉಡುಪಿ: ಪ್ರಸಕ್ತ ಬಿಜೆಪಿ ಜಿಲ್ಲಾ ತಂಡವು ಜ.27ರಂದು ಯಶಸ್ವೀ ಎರಡು ವರ್ಷಗಳನ್ನು ಪೂರೈಸಲಿದೆ. ಈ ಸಂದರ್ಭದಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಗಮನಲ್ಲಿಟ್ಟುಕೊಂಡು ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗವನ್ನು ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಮಹಾ ಶಕ್ತಿಕೇಂದ್ರContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ“
ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ
ಉಡುಪಿ: ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನಯನಾ ಗಣೇಶ್ ಉದ್ಯಾವರ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಯನಾ ಗಣೇಶ್ ರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿವಿಧ ಸ್ತರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದುContinue reading “ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ”
ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ (ಜನವರಿ 7 ) ರಿಂದ ಸೋಮವಾರದ ವರೆಗೆ ಕರುನಾಡು ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಆದ್ರೀಗ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅವಧಿಯನ್ನು (Weekend Curfew Timings Change) ರಾತ್ರಿ 8 ರ ಬದಲು 10 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅಧಿಕಾರಿಗಳು ಹಾಗೂ ಕೋವಿಡ್ ತಜ್ಞರ ಜೊತೆಗೆ ಸಭೆContinue reading “ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ”
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ
ಉಡುಪಿ: ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರಕಾರವು ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿ, ಕೀಳು ರಾಜಕೀಯ ಪ್ರದರ್ಶಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ”
ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ
ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನುContinue reading “ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ”
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ
ಉಡುಪಿ: ಪಂಜಾಬಿನ ಫಿರೋಜ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ಸುವ್ಯವಸ್ಥೆಯನ್ನು ನೀಡದೇ ಸಂವಿಧಾನ ವಿರೋಧಿಯಾಗಿ ವರ್ತಿಸಿ ಕೀಳು ಮಟ್ಟದ ರಾಜಕೀಯ ನಡೆ ಪ್ರದರ್ಶಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅನಿರೀಕ್ಷಿತ ಮಳೆಯ ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟ್ರೀಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”
ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿContinue reading
ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾContinue reading “ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್”
ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಉಡುಪಿ: ಜ.3ರಂದು ರಾಮನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಮತ್ತು ನಾಡ ಪ್ರಭು ಕೆಂಪೇಗೌಡ ರವರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯContinue reading “ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ”