ಉಡುಪಿ: ಕೇವಲ ವೋಟ್ ಬ್ಯಾಂಕಿಗಾಗಿ ಒಂದೇ ವರ್ಗವನ್ನು ಓಲೈಸುತ್ತಾ ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾ ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಾ ಬಂದಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಅವರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ನೀತಿ ಮತ್ತು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಫೆ.26ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿ ಈ ಬಗ್ಗೆ ವಿಸ್ತೃತ ವಿವರಣೆContinue reading “ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಡೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ?: ಕುಯಿಲಾಡಿ ಸುರೇಶ್ ನಾಯಕ್”
Monthly Archives: February 2022
ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಜನವಿರೋಧಿ ಕಾಂಗ್ರೆಸ್ ವಿರುದ್ಧ, ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬ್ರಹತ್ ಪ್ರತಿಭಟನೆ
ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ವಿಧಾನ ಮಂಡಲ ಅಧಿವೇಶನವನ್ನು ವಿನಾಕಾರಣ ಬಹಿಷ್ಕರಿಸಿರುವ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿContinue reading “ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಜನವಿರೋಧಿ ಕಾಂಗ್ರೆಸ್ ವಿರುದ್ಧ, ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬ್ರಹತ್ ಪ್ರತಿಭಟನೆ”
ಫೆ.26 ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ
ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ಅಧಿವೇಶನವನ್ನು ಬಹಿಷ್ಕರಿಸಿದ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹರ್ಷ ಅವರ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿಯ ಪ್ರತಿಭಟನಾ ಕಟ್ಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಫೆ.26 ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ”
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕ ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಂಚಾಲಕಿContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ”
ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್
ಶಿವಮೊಗ್ಗ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಘಂಟೆಯ ಒಳಗಡೆ ಆರೋಪಿಗಳನ್ನು ಬಂಧಿಸಿದ್ದು ರಾಜ್ಯ ಗೃಹ ಇಲಾಖೆ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಸಯ್ಯದ್ ನದೀಮ್, ಖಾಸಿಫ್, ಅಫಾನ್, ಖಾಸಿ ಅಲಿಯಾಸ್ ಸಲ್ಮಾನ್, ಚಿಕು, ಸಲ್ಮಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು 12 ಮಂದಿಯನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಎಡಿಜಿಪಿ ಮುರುಗನ್Continue reading “ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್”
ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಕಾನೂನಾತ್ಮಕ ಗಲ್ಲು ಶಿಕ್ಷೆಗೆ ಗುರಿಪಡಿಸಲು ಕುಯಿಲಾಡಿ ಆಗ್ರಹ
ಉಡುಪಿ: ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಫೆ.20ರಂದು ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಿಂದೂ ಯುವ ಕಾರ್ಯಕರ್ತನ ಕಗ್ಗೊಲೆ ಆತಂಕಕಾರಿಯಾಗಿದೆ. ಈ ಹತ್ಯೆ ಪ್ರಕರಣ ಹಿಂದೂ ಸಮಾಜವನ್ನು ಭೀತಿಗೊಳಪಡಿಸುವ ದುಷ್ಕೃತ್ಯವಾಗಿದೆ. ಮೊಗಲ್ ಕಾಲದಿಂದಲೂ ಈ ರೀತಿಯ ಬೀತಿ ಇದ್ದರೂ ಕೂಡಾ ಹಿಂದೂ ಸಮಾಜ ಯಾವುದಕ್ಕೂ ಜಗ್ಗದೆ ತಲೆ ಎತ್ತಿ ನಿಂತಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹಿಂದೂ ಸಮಾಜ ಎಂದೂ ಸೊಪ್ಪು ಹಾಕದು. ಈ ಹಿಂದೆಯೂ ರಾಜ್ಯದಲ್ಲಿ ನಡೆದContinue reading “ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಕಾನೂನಾತ್ಮಕ ಗಲ್ಲು ಶಿಕ್ಷೆಗೆ ಗುರಿಪಡಿಸಲು ಕುಯಿಲಾಡಿ ಆಗ್ರಹ”
ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸÀವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಭೆಯನ್ನು ಪ್ರಾರಂಭಿಸಲು ಎರಡು ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್ ಪಕ್ಷದ್ದಾದರೆ,Continue reading “ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್”
ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಮತ್ತು ಜಿಲ್ಲಾ ಮಾಧ್ಯಮ ಪ್ರಕೋಷ್ಠ ಇದರ ಸಂಯುಕ್ತ ಆಶ್ರಯದಲ್ಲಿ ಫೆ.19ರಂದು ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ! ಸಮೀರ್ ಕಗಲ್ಕರ್Continue reading “ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ”
ಪಕ್ಷ ಸಂಘಟನೆಯಲ್ಲಿ ವಿಸ್ತಾರಕರ ಕಾರ್ಯ ಪದ್ಧತಿ ಅತೀ ಶ್ರೇಷ್ಠ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಪಕ್ಷದ ಸೂಚನೆಯಂತೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ವಿಸ್ತಾರಕರ ಕಾರ್ಯ ಪದ್ಧತಿ ಪಕ್ಷ ಸಂಘಟನೆಯಲ್ಲಿ ಅತೀ ಶ್ರೇಷ್ಠ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.18ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ, ಉಡುಪಿ ಗ್ರಾಮಾಂತರ ಮತ್ತು ಕಾಪು ಮಂಡಲಗಳ ವ್ಯಾಪ್ತಿಯ ವಿಸ್ತಾರಕರ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಫೆ.21ರಿಂದ ಫೆ.28ರ ನಿಗದಿತ ಅವಧಿಯಲ್ಲಿ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಶಹ ಪ್ರತೀContinue reading “ಪಕ್ಷ ಸಂಘಟನೆಯಲ್ಲಿ ವಿಸ್ತಾರಕರ ಕಾರ್ಯ ಪದ್ಧತಿ ಅತೀ ಶ್ರೇಷ್ಠ: ಕುಯಿಲಾಡಿ ಸುರೇಶ್ ನಾಯಕ್”
ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಆರ್ಥಿಕ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಮಾಧ್ಯಮ ಪ್ರಕೋಷ್ಠ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಷಯದ ಕುರಿತು ವಿಚಾರ ಗೋಷ್ಠಿಯು ಫೆ.19 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಆರ್ಥಿಕ ತಜ್ಞ ಹಾಗೂ ಬಿಜೆಪಿContinue reading “ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ”