ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ


ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಆರ್ಥಿಕ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಮಾಧ್ಯಮ ಪ್ರಕೋಷ್ಠ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಷಯದ ಕುರಿತು ವಿಚಾರ ಗೋಷ್ಠಿಯು ಫೆ.19 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾರೆ.

ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ! ಸಮೀರ್ ಕಗಲ್ಕರ್ ವಿಚಾರ ಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ.

ಸಮಾಜದ ಆರ್ಥಿಕ, ವಾಣಿಜ್ಯ, ವ್ಯವಹಾರ ಹಾಗೂ ಇನ್ನಿತರ ರಂಗಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಕ್ಲಪ್ತ ಸಮಯದಲ್ಲಿ ಭಾಗವಹಿಸಿ ವಿಚಾರ ಗೋಷ್ಠಿಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹಾಗೂ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಪತ್ರಿಕಾ ಪ್ರಕಟನೆಯಲ್ಲಿ ಕೋರಿದ್ದಾರೆ.

Leave a comment

Design a site like this with WordPress.com
Get started