
ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ವಿಧಾನ ಮಂಡಲ ಅಧಿವೇಶನವನ್ನು ವಿನಾಕಾರಣ ಬಹಿಷ್ಕರಿಸಿರುವ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.