ಉಡುಪಿ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾ.9ರಂದು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಉಡುಪಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.
Daily Archives: March 10, 2022
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನಿಸಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಾ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಚುನಾವಣೆಯಲ್ಲಿ ಜನತೆ ವಿರೋಧ ಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ,Continue reading “ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್”