ಉಡುಪಿ: ರಾಜ್ಯಾದ್ಯಂತ ವಿವಾದ ಸೃಷ್ಠಿಸಿದ್ದ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ ವಸ್ತ್ರ ಸಂಹಿತೆಯ ಆದೇಶವನ್ನು ಎತ್ತಿಹಿಡಿದ ಉಚ್ಛ ನ್ಯಾಯಾಲಯ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆಯ ಪರವಾಗಿ ನೀಡಿರುವ ತೀರ್ಪು ಸಂವಿಧಾನಕ್ಕೆ ದೊರೆತ ಜಯವಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Daily Archives: March 15, 2022
ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು
ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಐತಿಹಾಸಿಕ ತೀರ್ಪು ನೀಡಿ, ಹಿಜಾಬ್ ಧರಿಸಲು ಅನುಮತಿ ಕೋರಿದ್ದಂತಹ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ. ಇಂದು ಫೆಬ್ರವರಿ 25ರಿಂದ 11 ದಿನಗಳ ವಾದ-ಪ್ರತಿವಾದ ಆಲಿಸಿದ್ದಂತ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು, ತನ್ನ ತೀರ್ಪನ್ನು ಪ್ರಕಟಿಸಿದೆ. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್,Continue reading “ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು”