ಉಡುಪಿ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾ.9ರಂದು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಉಡುಪಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.
Monthly Archives: March 2022
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನಿಸಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಾ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಚುನಾವಣೆಯಲ್ಲಿ ಜನತೆ ವಿರೋಧ ಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ,Continue reading “ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್”
ಮಾ.10-11: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಕಾಲಾವಧಿ ನೇಮೋತ್ಸವ
ಉಡುಪಿ: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 14ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಕಾಲಾವಧಿ ನೇಮೋತ್ಸವವು ಮಾ.10 ಮತ್ತು 11ರಂದು ನಡೆಯಲಿದೆ. ಮಾ.10ರಂದು ಬೆಳಿಗ್ಗೆ 10.00ಕ್ಕೆ ಹಸಿರುವಾಣಿ ಗರೋಡಿ ಪ್ರವೇಶ ಹಾಗೂ ರಾತ್ರಿ 8.00ಕ್ಕೆ ಅಗೇಲ್ ಸೇವೆ ನಡೆಯಲಿದೆ. ಮಾ.11ರಂದು ಬೆಳಿಗ್ಗೆ 6.00ಕ್ಕೆ ಶ್ರೀ ಬೈದೇರುಗಳ ಮತ್ತು ಪರಿವಾರ ದೈವಗಳ ಪೂಜೆ, ಮಧ್ಯಾಹ್ನ 12.30ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 6.15ಕ್ಕೆ ಶ್ರೀ ಬೈದೇರುಗಳ ನೇಮೋತ್ಸವವು ಜರಗಲಿದ್ದು, ರಾತ್ರಿ 8.30ಕ್ಕೆ ಅನ್ನ ಸಂತರ್ಪಣೆContinue reading “ಮಾ.10-11: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಕಾಲಾವಧಿ ನೇಮೋತ್ಸವ”
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಮಹಿಳಾ ಆರೋಗ್ಯ ತಪಾಸಣಾ ಶಿಬಿರ, ಸಾಧಕಿಯರಿಗೆ ಸನ್ಮಾನ
ಉಡುಪಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹಯೋಗದೊಂದಿಗೆ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಾ.8ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ನವಮಾಸ ವುಮನ್ಸ್ ಸ್ಪೆಷಾಲಿಟಿ ಕ್ಲಿನಿಕ್ ಕೋಟೇಶ್ವರ ಇದರ ವೈದ್ಯಾಧಿಕಾರಿ ಹಾಗೂ ಸ್ತ್ರೀರೋಗ ತಜ್ಞೆ ಡಾ! ಪ್ರಿಯಾಂಕ ಜೋಗಿ, ಸುನಾಗ್ ಹಾಸ್ಪಿಟಲ್ ಉಡುಪಿ ಇದರContinue reading “ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಮಹಿಳಾ ಆರೋಗ್ಯ ತಪಾಸಣಾ ಶಿಬಿರ, ಸಾಧಕಿಯರಿಗೆ ಸನ್ಮಾನ”
ಉಕ್ರೇನ್ ನಿಂದ ಭಾರತೀಯರ ರಕ್ಷಣೆಗೆ ಮೋದಿ ಸರಕಾರದ ದಿಟ್ಟ ಕ್ರಮ ಶ್ಲಾಘನೀಯ: ಉಡುಪಿ ಜಿಲ್ಲಾ ಬಿಜೆಪಿ
ಉಡುಪಿ: ಯುದ್ದ ಪೀಡಿತ ದೇಶ ಉಕ್ರೇನ್ ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ತೆರಳಿರುವ ಭಾರತೀಯ ವಿದ್ಯಾರ್ಥಿಗಳ ಸಹಿತ ಭಾರತೀಯ ನಾಗರಿಕರರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ದಿಟ್ಟ ಕ್ರಮ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ವಿಶ್ವದ ಮಹಾನ್ ರಾಷ್ಟ್ರಗಳು ಉಕ್ರೇನ್ ನಲ್ಲಿ ಸಿಲುಕಿರುವ ತಮ್ಮ ನಾಗರಿಕರನ್ನು ರಕ್ಷಿಸಲಾಗದೇ ಪರದಾಡುತ್ತಿದ್ದ ಸನ್ನಿವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರನ್ನು ರಕ್ಷಿಸಿ ಸ್ವದೇಶಕ್ಕೆ ಕರೆ ತರುವ ನಿಟ್ಟಿನಲ್ಲಿ ರಷ್ಯಾ ಜೊತೆContinue reading “ಉಕ್ರೇನ್ ನಿಂದ ಭಾರತೀಯರ ರಕ್ಷಣೆಗೆ ಮೋದಿ ಸರಕಾರದ ದಿಟ್ಟ ಕ್ರಮ ಶ್ಲಾಘನೀಯ: ಉಡುಪಿ ಜಿಲ್ಲಾ ಬಿಜೆಪಿ”
ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿರುವ ಈ ಬಾರಿಯ ಬಜೆಟ್ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಜೆಟ್ ನಲ್ಲಿ ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದೆ. ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿContinue reading “ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್”
ಸಚಿವ ಕೋಟ ಅವರಿಂದ ಅಹವಾಲು ಸ್ವೀಕಾರ
ಉಡುಪಿ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಫೆ.2ರಂದು ಉಡುಪಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್Continue reading “ಸಚಿವ ಕೋಟ ಅವರಿಂದ ಅಹವಾಲು ಸ್ವೀಕಾರ”
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಚಿವ ಕೋಟ ಭಾಗಿ
ಉಡುಪಿ: ಮಾ.2ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭಾಗವಹಿಸಿ ಸದೃಢ ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಚುನಾವಣಾ ದೃಷ್ಠಿಯಿಂದ ಯುವ ಮೋರ್ಚಾ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಯುವ ಕಾರ್ಯಕರ್ತರು ಬದ್ಧತೆಯಿಂದ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರContinue reading “ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಚಿವ ಕೋಟ ಭಾಗಿ”