ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರ್ಥಿಕ, ವಾಣಿಜ್ಯ, ವ್ಯಾಪಾರ, ಕೈಗಾರಿಕಾ ಮತ್ತು ಸಹಕಾರ ಪ್ರಕೋಷ್ಠಗಳ ಜಂಟಿ ಸಹಯೋಗದಿಂದ ಬಿಜೆಪಿ ಕಾಪು ಮಂಡಲದ ಆಶ್ರಯದಲ್ಲಿ ‘ವಿತ್ತೀಯ ಸಮಾವೇಶ ಗೌರವ ದಿವಸ’ದನ್ವಯ ಸಾಮಾನ್ಯ ಕೇಂದ್ರಗಳ ಸಂಪರ್ಕ ಕಾರ್ಯಕ್ರಮವು ಅಲೆವೂರು ರಾಮ್ ಪುರ ಗ್ರಾಮ ವನ್ ಸೇವಾ ಕೇಂದ್ರದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ರವರು ಪ್ರಧಾನಿContinue reading “ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ”

ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೇ ಒಂದು ಸಂದೇಶ ನೀಡಲಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು ಪಡೆಯಲಿದೆ. ಯಡಿಯೂರಪ್ಪ ಅವರು ರೈತಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ; ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಸಪೇಟೆಯ ಸಂಕಲ್ಪ ಸಭೆಯುContinue reading “ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ”

ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿContinue reading “ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ”

ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ : ಶ್ರೇಷ್ಠ ಮಾನವತಾವಾದಿ ಸಾಮಾಜಿಕ ಪರಿವರ್ತನೆಯ ಹರಿಕಾರ ಸಂವಿಧಾನ ಶಿಲ್ಪಿ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ತತ್ವಾದರ್ಶಗಳ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರContinue reading “ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ”

Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ

ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರContinue reading “ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ”

ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ: ಇಂದು ಎಲ್ಲಾ ಸ್ತರಗಳಲ್ಲಿ ಮಹಿಳೆಯರಿಗೆ ವಿಶೇಷ ಜವಾಬ್ದಾರಿ ಇದೆ. ಸಮೃದ್ಧ, ಸದೃಢ ಭಾರತ ನಿರ್ಮಾಣದತ್ತ ಪಕ್ಷದ ಸಂಸ್ಥಾಪಕರು ಕಂಡ ಕನಸನ್ನು ನನಸಾಗಿಸುವಲ್ಲಿ ಸಂಘಟಿತ ಶ್ರಮ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.13ರಂದು ಬಿಜೆಪಿ ಜಿಲ್ಲಾContinue reading “ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ”

ಆತ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ‘ಇಂಗ್ಲಿಷ್ ಪರ್ವ’ ವಿಶಿಷ್ಠ ಕಾರ್ಯಕ್ರಮ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇದರ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಂದ ‘ಇಂಗ್ಲಿಷ್ ಪರ್ವ’ ಎಂಬ ವಿಶಿಷ್ಟ ಕಾರ್ಯಕ್ರಮವು ಎ.10ರಂದು ಶಾಲಾ ವಠಾರದಲ್ಲಿ ನಡೆಯಿತು. ಇಂಗ್ಲಿಷ್ ಮಾಧ್ಯಮ ಶಾಲೆಗಳ ಪೈಪೋಟಿಯ ನಡುವೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಳಿವು ಉಳಿವಿನ ನಿರ್ಣಾಯಕ ಹಂತದ ನಡುವೆ ಕನ್ನಡ ಮಾಧ್ಯಮವನ್ನು ಉಳಿಸುವ ಸಲುವಾಗಿ ಈ ಮಾದರಿ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿಯವರ ನೇತೃತ್ವದಲ್ಲಿ ಸಹ ಶಿಕ್ಷಕರ ಸಹಯೋಗದೊಂದಿಗೆ ಜರಗಿತು. ಇಂಗ್ಲಿಷ್ ಭಾಷಾ ಶಿಕ್ಷಕಿ ಶಬನಾ ಪರ್ವೀನ್ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆContinue reading “ಆತ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ‘ಇಂಗ್ಲಿಷ್ ಪರ್ವ’ ವಿಶಿಷ್ಠ ಕಾರ್ಯಕ್ರಮ”

ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ

ಉಡುಪಿ:ಉಡುಪಿಯಲ್ಲಿ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದವರು ಯಾರು, ವಿವಾದವನ್ನು ಬೆಂಬಲಿಸಿ ಪೋಷಿಸಿದವರು ಯಾರು ಹಾಗೂ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದವರು ಯಾರು ಎಂಬ ಎಲ್ಲಾ ವಿಚಾರಗಳನ್ನು ಜಿಲ್ಲೆಯ ಬುದ್ಧಿವಂತ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಆದರೆ ತನ್ನ ನೆಚ್ಚಿನ ಎಸ್ಡಿಪಿಐ ಜೊತೆ ಶಾಮೀಲಾಗಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡು ಇದೀಗ ಹಿಜಾಬ್ ವಿವಾದದ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಾ, ಅಧಿಕಾರವಿಲ್ಲದೆ ಸೊರಗಿದ ಸೊರಕೆ ನೈಜ ಮುಖವಾಡ ಬಯಲಾಗಿದೆ. ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ”

ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ: ಕುಯಿಲಾಡಿ

ಉಡುಪಿ: ಕೇವಲ ಒಂದೇ ವರ್ಗದ ಓಲೈಕೆ ರಾಜಕಾರಣ ಮಾಡುತ್ತಾ ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್, ಅವರ ಸಾಧನೆ, ಘನತೆ, ಅರ್ಹತೆಗೆ ಭಾರತ ರತ್ನ ಗೌರವವನ್ನೂ ನೀಡದೆ, ಕನಿಷ್ಠ ಅವರ ಅಂತಿಮ ಸಂಸ್ಕಾರಕ್ಕೂ ದೆಹಲಿಯಲ್ಲಿ ಅವಕಾಶ ನೀಡದೇ ಅವಮಾನಿಸಿರುವುದು ಕರಾಳ ಇತಿಹಾಸವಾಗಿದೆ. ಮಾಜಿContinue reading “ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ: ಕುಯಿಲಾಡಿ”

Design a site like this with WordPress.com
Get started