ಉಡುಪಿ: ಮೇರಾ ಬೂತ್ ಸಬ್ಸೇ ಮಜ್ಬೂತ್’ ಎಂಬ ತತ್ವದಡಿ ಪ್ರತಿಯೊಂದು ಬೂತ್ ಗಳನ್ನು ಗೆಲ್ಲುವ ಗುರಿಯೊಂದಿಗೆ ಬೂತ್ ಮತ್ತು ಶಕ್ತಿಕೇಂದ್ರಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಮೇ 2ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇ 7ರಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಲಿದೆ.Continue reading “ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ”