ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ‌ ಪೂಜಾರಿಯವರು ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳ ಪ್ರಶ್ನೆಗಳನ್ನು ವಿಶ್ಲೇಷಿಸಿ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ತಿಳಿಸಿದರು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಮತ್ತು ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಯವರು ಪಕ್ಷದ ಸಂಘಟನಾತ್ಮಕ ವಿಚಾರಗಳು ಮತ್ತು ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಸುದೀರ್ಘ ಅವಧಿಯ ಬೇಡಿಕೆಯಾದ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಿರುವ ಕರ್ನಾಟಕ ಸರಕಾರದ ಮಾನ್ಯ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ವ್ಯವಹಾರ ಖಾತೆ ಸಚಿವ ಉಮೇಶ್ ಕತ್ತಿ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ವಿಶೇಷ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಪ್ರಭಾರಿ ಹಾಗೂ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಚುನಾವಣೆ ಸಮೀಪಿಸುತ್ತಿರುವ ಈ ಕಾಲಘಟ್ಟದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತ ಪ್ರಯತ್ನದ ಮೂಲಕ ಮಗದೊಮ್ಮೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲಿ ವಿಕ್ರಮ ಸಾಧನೆ ತೋರುವ ಜೊತೆಗೆ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಪಣದೊಂದಿಗೆ ಸದೃಢ ಪಕ್ಷ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿ.ಎಮ್. ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಪದಾಧಿಕಾರಿಗಳು, ವಿಶೇಷ ಆಹ್ವಾನಿತರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ‌ ಕಾರ್ಯಕ್ರಮ ನಿರೂಪಿಸಿ, ಸದಾನಂದ ಉಪ್ಪಿನಕುದ್ರು ವಂದಿಸಿದರು.

Leave a comment

Design a site like this with WordPress.com
Get started