
ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮೇ 10ರಂದು ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು.ಈ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.