ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು.

ಮಧ್ಯಾಹ್ನ 3.15ಕ್ಕೆ ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡುವರು. ಸಂಜೆ 4.00ಕ್ಕೆ 2014ರ ನಂತರ ಭಾರತದ ವಿಕಾಸ ವಿಷಯದ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡುವರು.

ಸಂಜೆ 4.45ಕ್ಕೆ ಸಚಿವ‌‌ ವಿ.ಸುನೀಲ್ ಕುಮಾರ್ ಸಮಾರೋಪ ಭಾಷಣ ಮಾಡುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉಪಸ್ಥಿತರಿರುವರು ಎಂದು ಬಿಜೆಪಿ ಕರ್ನಾಟಕ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started