ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ‌ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಬಿಜೆಪಿ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ‌ ಮತ್ತು ಮಂಡಲ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ್ ಕುಮಾರ್ ಉದ್ಯಾವರ ಸ್ವಾಗತಿಸಿದರು. ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಡಾ! ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.

‘ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ’ ಈ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು. ‘2014ರ ನಂತರ ಭಾರತದ ವಿಕಾಸ’ ಈ ವಿಷಯದ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡಿದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷೆತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಮಾರೋಪ ಭಾಷಣಗೈದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ, ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ್ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮತ್ತು ಮಂಡಲ ಪ್ರಕೋಷ್ಠಗಳ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಪ್ರಕೋಷ್ಠದ ಸಂಚಾಲಕ ಕೈಲಾಡಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a comment

Design a site like this with WordPress.com
Get started