ತೆಂಕ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಭೂತರಾಜ ಸಭಾಭವನದಲ್ಲಿ ಶಕ್ತಿಕೇಂದ್ರ ಪ್ರಮುಖ್ ಕೇಶವ ಮೊಯ್ಲಿ‌ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ, ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started