
ಕಾಪು: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ನಾಗರಾಜ್ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.
ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಹಾಗೂ ಸರಕಾರದ ಸಾಧನೆಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಶಕ್ತಿಕೇಂದ್ರ ಸಹಪ್ರಮುಖ್ ಹರ್ಷಿತ್ , ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಯೋಗೀಶ್, ರಾಜೇಶ್ ಅಂಬಾಡಿ, ರತ್ನಾಕರ, ಗುರುಕ್ರಪಾ ರಾವ್, ಗುರುಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.