
ಕಾಪು: ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಪುರಂದರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.
ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಮೋದೀಜಿ ಆಡಳಿತದ 8 ವರ್ಷದ ವಾರ್ಷಿಕ ಆಚರಣೆ ವಿಶಿಷ್ಟವಾಗಿ ಫಲಾನುಭವಿಗಳ ಸಮಾವೇಶ ಮಾಡುವ ಮೂಲಕ ಆಚರಿಸಲು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ ರವರು ಮಾರ್ಗದರ್ಶನ ಮಾಡಿದರು. ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಮಹಾಶಕ್ತಿಕೇಂದ್ರ ಪ್ರಧಾನಕಾರ್ಯದರ್ಶಿ ಶಿಲ್ಪಾ ಸಾಲ್ಯನ್, ಮಂಡಲ ಕಾರ್ಯದರ್ಶಿಗಳಾದ ಸುಭಾಸ್ ನಾಯ್ಕ್, ಶಂಕರ ಸಾಲ್ಯನ್, ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ 90% ಕ್ಕೂ ಅಧಿಕ ಅಂಕಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.