
ಕಾಪು: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಸೌಂದರ್ಯ ಸಭಾಭವನದಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.
ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಮೋದೀಜಿ ಆಡಳಿತದ 8 ವರ್ಷದ ವಾರ್ಷಿಕ ಆಚರಣೆ ವಿಶಿಷ್ಟವಾಗಿ ಫಲಾನುಭವಿಗಳ ಸಮಾವೇಶ ಮಾಡುವ ಮೂಲಕ ಆಚರಿಸಲು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಾರ್ಗದರ್ಶನ ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಉದ್ಯಾವರ ಹಾಗೂ ಕಾಪು ಕ್ಷೇತ್ರದ ಅಭಿವ್ಯಕ್ತಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಮುಂದೆಯೂ ಮತ್ತಷ್ಟು ಅನುದಾನ ತಂದು ಎಲ್ಲ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ತಿಳಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರಾದ ವಿಜಯ್ ಕುಮಾರ್, ಮಾಹಶಕ್ತಿಕೇಂದ್ರ ಉಸ್ತುವಾರಿ ಗುರುಪ್ರಸಾದ್ ಶೆಟ್ಟಿ, ಕಾಪುಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರವಿ ಕೋಟ್ಯನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಹಾಶಕ್ತಿಕೇಂದ್ರ ಪ್ರಧಾನಕಾರ್ಯದರ್ಶಿ ಅಶೋಕ್ ಕುಮಾರ್, ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರಿಯಾನ್, ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.