
ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚ ತಂಡದಿಂದ ಇಂದು ಮೋದೀಜಿ ಸರಕಾರದ 8 ನೇ ವಾರ್ಷಿಕೋತ್ಸವದ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸ್ವಚ್ಚತಾ ಕಾರ್ಯಕ್ರಮ ನಡೆಸುವ ಮೂಲಕ ಸೇವಾ ಚಟುವಟಿಕಗಳಿಗೆ ಚಾಲನೆ ನೀಡಲಾಯಿತು. ಹೆಜಮಾಡಿ, ಪಡುಬಿದ್ರೆ ಹಾಗೂ ಪಲಿಮಾರು ಪಂಚಾಯತ್ ಗಳ ವ್ಯಾಪ್ತಿಯಲ್ಲಿ ತಲಾ ಒಂದು ಅಂಗನವಾಡಿ ಆವರಣ ಸ್ಬಚ್ಚತಾ ಸೇವೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ನೀತಾ ಗುರುರಾಜ್, ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಹಿಳಾಮೋರ್ಚ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಗಾಯತ್ರಿ ಪ್ರಭು, ಪಡುಬಿದ್ರೆ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಮಹಿಳಾಮೋರ್ಚ ಪದಾಧಿಕಾರಿಗಳು, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.