
ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರವು ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಡ ಶಾಲೆಯಲ್ಲಿ ನಡೆಯಿತು*
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮೋದೀಜಿ ಆಡಳಿತದ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ವಿವರಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲಾ ಎಸ್ ಟಿ ಮೋರ್ಚ ಅಧ್ಯಕ್ಷರಾದ ನಿತ್ಯಾನಂದ ನಾಯ್ಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಶಕ್ತಿಕೇಂದ್ರ ಪ್ರಮುಖ್ ದಯಾನಂದ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಉಪಾಧ್ಯಕ್ಷರುಗಳಾದ ಸಂಧ್ಯಾ ಕಾಮತ್, ಸುಭಾಸ್ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಸುನೀತ ನಾಯ್ಕ್ ಉಪಸ್ಥಿತರಿದ್ದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ *ನಯನ ಗಣೇಶ್* ಭೇಟಿ ನೀಡಿ ಶುಭಹಾರೈಸಿದರು. ಮಂಡಲ ಎಸ್ ಟಿ ಮೋರ್ಚ ಪ್ರಧಾನ ಕಾರ್ಯದರ್ಶಿ ಮಾಲತಿ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.