
ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕಾಪು ಮಹಿಳಾ ಮೋರ್ಚಾದ ವತಿಯಿಂದ ಇಂದು *ಕುಕ್ಕೆಹಳ್ಳಿ ಪಂಚಾಯತ್ ವ್ಯಾಪ್ತಿಯ 2 ಅಂಗನವಾಡಿಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು* ಬಳಿಕ ಅಂಗನವಾಡಿಯಲ್ಲಿ ಕೇಂದ್ರಸರಕಾರದ ಸಾಧನೆಗಳನ್ನು ವಿವರಿಸಲಾಯಿತು.
ಬಳಿಕ ಪೆರ್ಡೂರು ಹಾಗೂ ಭೈರಂಪಳ್ಳಿ ಅಂಗನವಾಡಿಗಳಿಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದೆವು. ಬಳಿಕ ಬೊಮ್ಮರಬೆಟ್ಟು ಒಂದು ಅಂಗನವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಒಟ್ಟು 6 ಅಂಗನವಾಡಿಗಳಲ್ಲಿ ವಿವಿಧ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾಧ್ಯಕ್ಷರು ಮಾಹಿತಿ ಶಿಬಿರವನ್ನು ಉಧ್ಘಟಿಸಿದರೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಿದರು. ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಸಂಧ್ಯಾ ಕಾಮತ್, ಮಂಡಲ ಕಾರ್ಯದರ್ಶಿ ಶಂಕರ್ ಸಾಲ್ಯನ್, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸಾಲ್ಯನ್, ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯನ್, ಜಿಲ್ಲಾ ಮಹಿಳಾಮೋರ್ಚ ಕಾರ್ಯದರ್ಶಿ ನೀರಜಾ ಶೆಟ್ಟಿ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹಲವೆಡೆ ಅಂಗನವಾಡಿ ಮಕ್ಕಳಿಗೆ ಸಿಹಿ ಹಂಚಲಾಯಿತು.