ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಹಿರಿಯಡ್ಕ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಸಂಚಾಲಕರಾದ ಶಿಲ್ಪಾ ಜಿ‌ ಸುವರ್ಣ, ಮಂಡಲ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ, ಬಡಗುಬೆಟ್ಟು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಸಂಧ್ಯಾ ಕಾಮತ್, ಜಿಲ್ಲಾ ಕಾರ್ಯದರ್ಶಿ ಸುನೀತ ನಾಯ್ಕ್, ಪಕ್ಷದ ಪ್ರಮುಖರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ನೀರಜಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಕಚೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್ ಕಾರ್ಯಕ್ರಮ ನಿರೂಪಿಸಿದರೆ ಕೊಡಿಬೆಟ್ಟು ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು‌ ಸ್ವಾಗತಿಸಿದರು.

Leave a comment

Design a site like this with WordPress.com
Get started