

ಉಡುಪಿ: ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಇದರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ ಸಲುವಾಗಿ ‘ಸೇವೆ, ಸುಶಾಶನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’ಯು ಮಲ್ಪೆ ಬೀಚ್ ನ ಗಾಂಧಿ ಪ್ರತಿಮೆ ಬಳಿಯಿಂದ ಹೊರಟು ಕಲ್ಮಾಡಿ – ಆದಿವುಡುಪಿ – ಬನ್ನಂಜೆ – ಬ್ರಹ್ಮಗಿರಿ – ಜೋಡುಕಟ್ಟೆ – ಕೆ.ಎಂ. ಮಾರ್ಗ – ಸಿಟಿ ಬಸ್ ಸ್ಟ್ಯಾಂಡ್ – ಕುಂಜಿಬೆಟ್ಟು – ಮಣಿಪಾಲ್ ಸಿಂಡಿಕೇಟ್ ಸರ್ಕಲ್ – ಡಾ! ವಿ.ಎಸ್. ಆಚಾರ್ಯ ರಸ್ತೆ – ಮಣಿಪಾಲ್ ಡಾಲರ್ಸ್ ಸರ್ಕಲ್ – ಮಣಿಪಾಲ ಟೈಗರ್ ಸರ್ಕಲ್ – ಪರ್ಕಳ – ಮಣಿಪಾಲ್ ಬಸ್ ನಿಲ್ದಾಣ – ಇಂದ್ರಾಳಿ ಮಾರ್ಗವಾಗಿ ಕುಂಜಿಬೆಟ್ಟು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಸಮಾಪನಗೊಂಡಿತು.
ವಿಕಾಸ ತೀರ್ಥ ಬೈಕ್ ರ್ಯಾಲಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಚಾಲನೆ ನೀಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೈಕ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ರೋಶನ್ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಳ, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.