Design a site like this with WordPress.com
Get started

ಯೋಗದಿಂದ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣ: ಕೆ.ಉದಯ ಕುಮಾರ್ ಶೆಟ್ಟಿ


ಯೋಗ ಮತ್ತು ಭಾರತಕ್ಕೆ ಅವಿನಾಭಾವ ಸಂಬಂಧವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣವಾದಂತಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೆ.2014ರಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಹೆಮ್ಮೆಯ ಯೋಗಾಭ್ಯಾಸದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಪ್ತಸ್ತಾಪಕ್ಕೆ ಮಾನ್ಯತೆ ದೊರೆತು ಜೂನ್ 21, 2015ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಪ್ರಥಮ ಬಾರಿಗೆ ಆಚರಿಸಲಾಯಿತು. ಸುಮಾರು 6,000 ವರ್ಷಗಳ ಇತಿಹಾಸವಿರುವ ಭೌತಿಕ, ಮಾನಸಿಕ ಆರೋಗ್ಯ ಸಂರಕ್ಷಣೆಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ ಸ್ಪೂರ್ತಿ ನೀಡುವ ಯೋಗಾಭ್ಯಾಸವನ್ನು ಜನತೆ ತಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವನ್ನಾಗಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಅವರು ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉಡುಪಿ ಜಿಲ್ಲಾ ಸಂಚಾಲಕ ಮಹೇಶ್ ಠಾಕೂರ್ ಮಾತನಾಡಿ ಜಿಲ್ಲಾ ಬಿಜೆಪಿ ವತಿಯಿಂದ ಜೂನ್ 21ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 7.30 ರಿಂದ 9.30ರವರೆಗೆ ಶ್ಯಾಮಿಲಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಡಾ! ಚಿನ್ಮಯ್ ಗೋಸ್ವಾಮಿಯವರು ಯೋಗದ ಮಹತ್ವ ಮತ್ತು ಶಿಸ್ತುಬದ್ಧ ಜೀವನದ ಬಗ್ಗೆ ಮಾಹಿತಿ ನೀಡಲಿದ್ದು, ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಯೋಗ ತರಗತಿ ನಡೆಸಿಕೊಡಲಿದ್ದಾರೆ. ಜಿಲ್ಲೆಯ ಸಚಿವರು, ಶಾಸಕರು, ಪಕ್ಷದ ಎಲ್ಲಾ ಸ್ತರದ‌ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಶಕ್ತಿಕೇಂದ್ರ ಮಟ್ಟದಲ್ಲಿ ಆಯೋಜಿಸಿ ಯಶಸ್ವಿಗೊಳಿಸುವ ಜೊತೆಗೆ ಜೂನ್ 23ರಂದು ನಡೆಯುವ ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನವನ್ನು ಪ್ರತೀ ಬೂತ್ ಗಳಲ್ಲಿ ಆಯೋಜಿಸಬೇಕು. ಜೂನ್ 25ರಂದು ತುರ್ತುಪರಿಸ್ಥಿತಿ ಕರಾಳ ದಿನಾಚರಣೆಯನ್ನು ಜಿಲ್ಲೆ ಮತ್ತು ಮಂಡಲ ಮಟ್ಟದಲ್ಲಿ ಹಮ್ಮಿಕೊಳ್ಳುವ ಜೊತೆಗೆ ಜುಲೈ 7ರಂದು ಶ್ಯಾಮಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಬೂತ್ ಗಳಲ್ಲಿ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಡಾ! ವಿಜಯೇಂದ್ರ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪಕ್ಷದ ಪ್ರಮುಖರು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: