ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಮೋದಿ, ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳು. ಇಂದು ವಿಶ್ವದ ಮೂಲೆ ಮೂಲೆಗಳಲ್ಲಿಯೂ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೊರೋನಾ ಸಮಯದಲ್ಲಿಯೂ ಯೋಗದ ಉತ್ಸಾಹ ಕಡಿಮೆಯಾಗಲಿಲ್ಲ ಎಂದರು. ಯೋಗ ಶಾಂತಿಯನ್ನು ಮೂಡಿಸುತ್ತದೆ ಎಂದು ನಮ್ಮ ಋಷಿಮುನಿಗಳು ತೋರಿಸಿಕೊಟ್ಟಿದ್ದಾರೆ.Continue reading “ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗ ದಿನಾಚರಣೆ”
Daily Archives: June 21, 2022
ಉಡುಪಿ ಜಿಲ್ಲಾ ಬಿಜೆಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಜೊತೆಯಾಗಿ ದೀಪ ಪ್ರಜ್ವಲಿಸುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ.ಉದಯ ಕುಮಾರ್ ಶೆಟ್ಟಿಯವರು ಯೋಗ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ! ಪ್ರಭಾಕರContinue reading “ಉಡುಪಿ ಜಿಲ್ಲಾ ಬಿಜೆಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ“