

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಜೊತೆಯಾಗಿ ದೀಪ ಪ್ರಜ್ವಲಿಸುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ.ಉದಯ ಕುಮಾರ್ ಶೆಟ್ಟಿಯವರು ಯೋಗ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ! ಪ್ರಭಾಕರ ಯು. ರೆಂಜಾಳ ರವರು ಯೋಗದ ಮಹತ್ವ ಮತ್ತು ಉಪಯೋಗದ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಇಂದ್ರಾಳಿ ಯವರು ಯೋಗ ತರಗತಿಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಯೋಗ ದಿನಾಚರಣೆಯ ಜಿಲ್ಲಾ ಸಂಚಾಲಕ ಮಹೇಶ್ ಠಾಕೂರ್ ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.