Design a site like this with WordPress.com
Get started

ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ

ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಬೆಂಗಳೂರಿನ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಡಿಯೋ ಮಾಡಿContinue reading “ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ”

ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕContinue reading “ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!”

ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!

ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಫೇಸ್ಬುಕ್ ಲೈವ್ ನಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಉದ್ಧವ್ ಠಾಕ್ರೆ ಸಲ್ಲಿಸಿದ ರಾಜೀನಾಮೆ ಪತ್ರಕ್ಕೆ ರಾಜ್ಯಪಾಲರಿಂದ ಅಂಗೀಕಾರ ದೊರೆತಿದ್ದುContinue reading “ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!”

ಉದಯಪುರ ಘಟನೆಯ‌ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಸಿ.ಎಂ. ಸಿದ್ಧರಾಮಯ್ಯContinue reading “ಉದಯಪುರ ಘಟನೆಯ‌ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್”