Design a site like this with WordPress.com
Get started

ಜಿಲ್ಲೆಯಾದ್ಯಂತ ಮುಂದುವರಿದ ವ್ಯಾಪಕ ಮಳೆ: ನಾಳೆ(ಜುಲೈ 06) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜುಲೈ 05 : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜು.06) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವಡೆ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲವಡೆ ಹೆದ್ದಾರಿಗಳು, ರಸ್ತೆಗಳು ಜಲಾವೃತಗೊಂಡಿದೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂContinue reading “ಜಿಲ್ಲೆಯಾದ್ಯಂತ ಮುಂದುವರಿದ ವ್ಯಾಪಕ ಮಳೆ: ನಾಳೆ(ಜುಲೈ 06) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ”

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಬರ್ಬರ ಕೊಲೆ : ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೈಯ್ಯಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರ ರಿಸೆಪ್ಷನ್ ನಲ್ಲಿ ಕೊಲೆ ನಡೆದಿದ್ದು, ಹಂತಕರು ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಗುರೂಜಿ ಜೊತೆ ಮಾತನಾಡುತ್ತಲೇ ಮಾರಾಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಗುರೂಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.