Design a site like this with WordPress.com
Get started

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸಾಮಾಜಿಕ ಕ್ಷೇತ್ರದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಸಿನಿಮಾ ಕ್ಷೇತ್ರದಿಂದ ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ಸಂಗೀತ ಕ್ಷೇತ್ರದಿಂದ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ;‌ ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಪ್ರೇರಣೆ ಹಾಗೂ ನವ ಉಡುಪಿಯ ನಿರ್ಮಾತೃ ಡಾ! ವಿ.ಎಸ್. ಆಚಾರ್ಯರವರ ಮಾರ್ಗದರ್ಶನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜು.6ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಡಾ! ವಿ.ಎಸ್. ಆಚಾರ್ಯ ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪುಷ್ಪಾರ್ಚನೆಗೈದು ಮಾತನಾಡಿದರು.Continue reading ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ;‌ ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್