ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ. ಘಟಕ ಇದರ ಸಹಯೋಗದೊಂದಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ‘ಉಚಿತ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ’, ಉಚಿತ ‘ಆಯುಷ್ಮಾನ್ ಕಾರ್ಡ್’ ಮತ್ತು ‘ಈ-ಶ್ರಮ್ ಕಾರ್ಡ್ ನೊಂದಾವಣೆ’ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.) ಮತ್ತು ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಇದರ ಸಹಯೋಗದೊಂದಿಗೆ ‘ಉಚಿತ ನೇತ್ರ ತಪಾಸಣಾ ಶಿಬಿರ’ ಮತ್ತು ‘ಉಚಿತ ಕನ್ನಡಕ ವಿತರಣೆ’ ಕಾರ್ಯಕ್ರಮವು ಜು.10 ರವಿವಾರ ಅಂಬಲಪಾಡಿ (ಯೂನಿಯನ್ ಬ್ಯಾಂಕ್ ಹಿಂಬದಿ) ‘ವಸಂತ ಮಂಟಪ’ದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ‘ಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ’ ಮತ್ತು ‘ಪ್ರತಿಭಾ ಪುರಸ್ಕಾರ’ ನಡೆಯಲಿದೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಉಡುಪಿ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರ ಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ. ಭಾಗವಹಿಸಲಿದ್ದಾರೆ.
ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ನಗರ ಕಾರ್ಯದರ್ಶಿ ದಯಾಶಿನಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಯೋಗೀಶ್ ಶೆಟ್ಟಿ ಅಂಬಲಪಾಡಿ, ರಾಮರಾಜ್ ಕಿದಿಯೂರು, ಅಂಬಲಪಾಡಿ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ನಾಗರಾಜ್ ಕರ್ಕೇರ ಕಿದಿಯೂರು, ವಿಜಯ ಶೆಟ್ಟಿ ಕಪ್ಪೆಟ್ಟು ಉಪಸ್ಥಿತರಿರುವರು.
ಸಮಾವೇಶದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿ, ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳ ಸಹಿತ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ನಗರ ಪ್ರಕಟಣೆ ತಿಳಿಸಿದೆ.