ಧರ್ಮಸ್ಥಳ: ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜು.16ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ,Continue reading “ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”
Daily Archives: July 16, 2022
ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಪುನರಪಿ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯContinue reading “ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ”