
ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ “ಕಡೇ ನಟ್ಟಿ” (ಸಮಾರೋಪ) ಇಂದು ದಿನಾಂಕ 30-07-2022 ರಂದು ಕಡೆಕಾರ್ ಭುವನೆಂದ್ರ ಕಿದಿಯೂರ್ ಮನೆಯ ಬಳಿ ನಡೆಯಿತು.*
*ಸ್ಥಳೀಯ ಕೃಷಿಕರು, ಸಂಘಟನೆಗಳ ಸದಸ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಪ್ರಥಮವಾಗಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರು ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.*
*ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೃಷಿಯ ಮಹತ್ವದ ಬಗ್ಗೆ ತಿಳಿಸಿದರು. ಹಾಗೂ ಕೃಷಿ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.*
*ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿಗಳಾದ ರಾಘವೇಂದ್ರ ಉಪ್ಪೂರು, ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಗೋವಾ ಇದರ ಇನ್‌ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯರಾದ ಶಿವಕುಮಾರ್, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳಾದ ಡಾ. ಶಂಕರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.*