ಉಡುಪಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು-ವಲಯ ನೇತೃತ್ವದಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರ ಅಧ್ಯಕ್ಷತೆಯಲ್ಲಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಅಮೀನ್Continue reading “ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”
Monthly Archives: July 2022
ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ
ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಹಿರಿಯContinue reading “ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ”
ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ
ಧರ್ಮಸ್ಥಳ: ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜು.16ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ,Continue reading “ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”
ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಪುನರಪಿ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯContinue reading “ಬಿಜೆಪಿ ಮಿಷನ್ 150ರ ಜೊತೆಗೆ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಸುರೇಶ್ ನಾಯಕ್ ಕರೆ”
ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ
ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿ.ಎಂ. ಬೊಮ್ಮಾಯಿ ಕಾಪು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತContinue reading “ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ”
ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ; ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ
ಉಡುಪಿ: ರಾಷ್ಟ್ರ ಹಿತಕ್ಕಾಗಿ ಮಂತ್ರಿ ಪದವಿಯನ್ನು ತೊರೆದು ಭಾರತೀಯ ಜನಸಂಘವನ್ನು ಸ್ಥಾಪಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿ, ಅಂತ್ಯೋದಯ ಪರಿಕಲ್ಪನೆಯನ್ನು ನೀಡಿದ ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ಮಹಾನ್ ಚೇತನಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದೆ. ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ಭದ್ರ ಬುನಾದಿಯಲ್ಲಿ ಸದೃಢವಾಗಿ ಬೆಳೆದು ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆನಿಸಿರುವ ಬಿಜೆಪಿಯ ಕಾರ್ಯಕರ್ತನಾಗುವುದು ಭಾಗ್ಯವೆನಿಸಿದರೆ, ಪಕ್ಷದ ಪದಾಧಿಕಾರಿಯಾಗುವುದು ಸೌಭಾಗ್ಯ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಉಡುಪಿ ನಗರ,Continue reading “ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ; ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ“
ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ
ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ.Continue reading “ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ”
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ
ಉಡುಪಿ: ‘ಭಜನೆ ಜಬ್ಬಣ್ಣ’ರೆಂದೇ ಪ್ರಖ್ಯಾತರಾಗಿದ್ದ ಜಬ್ಬ ಪೂಜಾರಿ (90 ವರ್ಷ) ಬಂಕೇರಕಟ್ಟ, ಅಂಬಲಪಾಡಿ ಇವರು ಜು.6ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಪದಾಧಿಕಾರಿಯಾಗಿ, ಭಜನಾ ನಿರ್ವಾಹಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಜಬ್ಬ ಪೂಜಾರಿಯವರು ಸಂಘದ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಭಜನಾಸಕ್ತರಾಗಿದ್ದ ಜಬ್ಬ ಪೂಜಾರಿಯವರು ಸ್ವತಃContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ“
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸಾಮಾಜಿಕ ಕ್ಷೇತ್ರದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಕೇರಳದ ಮಾಜಿ ಅಥ್ಲೀಟ್ ಪಿಟಿ ಉಷಾ , ಸಿನಿಮಾ ಕ್ಷೇತ್ರದಿಂದ ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್ , ಸಂಗೀತ ಕ್ಷೇತ್ರದಿಂದ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ; ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಪ್ರೇರಣೆ ಹಾಗೂ ನವ ಉಡುಪಿಯ ನಿರ್ಮಾತೃ ಡಾ! ವಿ.ಎಸ್. ಆಚಾರ್ಯರವರ ಮಾರ್ಗದರ್ಶನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜು.6ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಡಾ! ವಿ.ಎಸ್. ಆಚಾರ್ಯ ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪುಷ್ಪಾರ್ಚನೆಗೈದು ಮಾತನಾಡಿದರು.Continue reading “ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ; ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್“